ಚುನಾವಣೆ ಸೋಲಿನ ಬಗ್ಗೆ ಪರಾಮರ್ಶೆ ನಡೆಸುತ್ತೇವೆ: ಸೋನಿಯಾ ಗಾಂಧಿ
ಶುಕ್ರವಾರ, 20 ಮೇ 2016 (12:53 IST)
ಆಸ್ಸಾಂ ಮತ್ತು ಕೇರಳ ರಾಜ್ಯಗಳಲ್ಲಿನ ವಿಧಾನಸಭೆ ಚುನಾವಣೆ ಸೋಲು ಕುರಿತಂತೆ ಪರಾಮರ್ಶೆ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಚುನಾವಣೆಯಲ್ಲಿನ ಸೋಲಿಗೆ ಕಾರಣವಾದ ಸಂಗತಿಗಳ ಬಗ್ಗೆ ಪರಾಮರ್ಶೆ ನಡೆಸಿ, ನಿಲುವುಗಳಲ್ಲಿ ಬದಲಾವಣೆ ತರಲಾಗುವುದು. ಜನತೆಯ ಸೇವೆಯ ನಮ್ಮ ಮೊದಲ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
ಪಂಚರಾಜ್ಯಗಳ ಚುನಾವಣೆಯಲ್ಲಿ ಜಯಗಳಿಸಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರನ್ನು ಅಭಿನಂಧಿಸಿದ ಅವರು ಉತ್ತಮ ಅಡಳಿತ ಮತ್ತು ಅಭಿವೃದ್ಧಿ ಸರಕಾರಗಳು ರಾಜಕೀಯ ಮಂತ್ರವಾಗಲಿ ಎಂದು ಹೇಳಿದ್ದಾರೆ.
ಆಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು , ಪುದುಚೇರಿ ಮತ್ತು ಕೇರಳ ರಾಜ್ಯಗಳ ಜನತೆ ನೀಡಿದ ತೀರ್ಪಿಗೆ ತಲೆಬಾಗುತ್ತೇವೆ. ಚುನಾವಣೆಯಲ್ಲಿ ಪಕ್ಷದ ಪರವಾಗಿ ಕಾರ್ಯನಿರ್ವಹಿಸಿದ ಕಾಂಗ್ರೆಸ್ ಮುಖಂಡರಿಗೆ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸುವುದಾಗಿ ತಿಳಿಸಿದ್ದಾರೆ.
ಪುದುಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿ ಅಧಿಕಾರಕ್ಕೆ ತಂದ ಜನತೆಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.