ಬಿಹಾರ್ ಚುನಾವಣೆಯಲ್ಲಿ ಬಿಜೆಪಿ ಸೋತಲ್ಲಿ ಪ್ರಧಾನಿ ಮೋದಿ ರಾಜೀನಾಮೆ ನೀಡಲಿದ್ದಾರೆಯೇ: ಲಾಲು ಯಾದವ್

ಸೋಮವಾರ, 12 ಅಕ್ಟೋಬರ್ 2015 (18:49 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಬಗ್ಗೆ ಲೇವಡಿ ಮಾಡಿದ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದಲ್ಲಿ ಪ್ರಧಾನಿ ಹುದ್ದೆಗೆ ಮೋದಿ ರಾಜೀನಾಮೆ ನೀಡಲಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
 
ಬಿಹಾರ್‌ನಲ್ಲಿ ಮೋದಿ ಬಿಜೆಪಿಯ ಮುಖವಾಡವಾಗಿದ್ದಾರೆ. ಕೇಂದ್ರ ಸರಕಾರದ ಎಲ್ಲಾ ಸಚಿವರು ಕಳೆದ ಮೂರು ತಿಂಗಳುಗಳಿಂದ ನಿರಂತರವಾಗಿ ಬಿಹಾರ್‌ನಲ್ಲಿ ಬಿಡಾರ ಹೂಡಿದ್ದಾರೆ. ಒಂದು ವೇಳೆ ಚುನಾವಣೆ ಸೋತಲ್ಲಿ ಪ್ರಧಾನಿ ಹುದ್ದೆಯನ್ನು ತ್ಯಜಿಸಲಿದ್ದಾರೆಯೇ ಎಂದು ಲಾಲು ಟ್ವೀಟ್ ಮಾಡಿದ್ದಾರೆ.
 
ಪ್ರಧಾನಿ ಮೋದಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿರುವುದು ನಿತೀಶ್ ಮತ್ತು ಲಾಲುಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
 
ಕಳೆದ 25 ವರ್ಷಗಳಿಂದ ಬಡಾ ಭಾಯಿ(ಲಾಲು ಯಾದವ್) ಮತ್ತು ಛೋಟಾ ಭಾಯಿ(ನಿತೀಶ್ ಕುಮಾರ್) ಸರಕಾರ ನಡೆಸುತ್ತಿದ್ದಾರೆ. ಆದರೆ, ಬಿಹಾರ್ ರಾಜ್ಯದ ಅಭಿವೃದ್ಧಿಯ ಬಗ್ಗೆ ಅವರು ಯಾವತ್ತೂ ಯೋಚಿಸುವುದಿಲ್ಲ ಎಂದು ಮೋದಿ ಚುನಾವಣೆ ಪ್ರಚಾರದಲ್ಲಿ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯಸಭೆಯಲ್ಲಿ ಬಹುಮತ ಪಡೆಯಲು ಬಿಜೆಪಿಗೆ ಬಿಹಾರ್ ಚುನಾವಣೆ ತುಂಬಾ ಮಹತ್ವದ್ದಾಗಿದೆ. ರಾಜ್ಯಸಭೆಯಲ್ಲಿ ಬಹುಮತದ ಕೊರತೆಯಿಂದಾಗಿ ಪ್ರಮುಖ ಮಸೂದೆಗಳಿಗೆ ಅಂಗೀಕಾರ ಪಡೆಯಲು ಎನ್‌ಡಿಎ ಸರಕಾರಕ್ಕೆ ಅಡ್ಡಿಯಾಗಿದೆ. 

ವೆಬ್ದುನಿಯಾವನ್ನು ಓದಿ