ಭಾರತದ 1694 ಹಳ್ಳಿಗಳಿಗೆ ಇನ್ನೂ ವಿದ್ಯುತ್ ಸಂಪರ್ಕವಿಲ್ಲ, ಮೊದಲು ಈ ಗ್ರಾಮಗಳಿಗೆ 2018 ರ ಡಿಸೆಂಬರ್ ಒಳಗಾಗಿ ವಿದ್ಯುತ್ ಕಲ್ಪಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. 2019 ರ ಹೊತ್ತಿಗೆ ನಿರಂತರ ವಿದ್ಯುತ್ ಪೂರೈಕೆಯಾಗದಿದ್ದರೆ ವಿದ್ಯುತ್ ಪೂರೈಕೆ ಸಂಸ್ಥೆಗಳಿಗೆ ದಂಡ ವಿದಿಸುವುದಷ್ಟೇ ಅಲ್ಲದೇ, ಇದಕ್ಕಾಗಿ ಹೊಸ ಕಾನೂನುಗಳನ್ನು ರಚಿಸಲಾಗುವುದು. ತಾಂತ್ರಿಕ ತೊಂದರೆಗಳಿದ್ದಾಗ ಮಾತ್ರ ವಿದ್ಯುತ್ ಪೊರೈಕೆಯನ್ನು ಕಡಿತಗೊಳಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.