ಮಹಾರಾಷ್ಟ್ರ ಮಿನಿ ಮೋದಿ ಸರಕಾರ ರಚನೆ: ಬಿಜೆಪಿ

ಭಾನುವಾರ, 19 ಅಕ್ಟೋಬರ್ 2014 (13:02 IST)
ಬಿಜೆಪಿ ಪಕ್ಷ ಒಂದು ವೇಳೆ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಿದಲ್ಲಿ ಮಿನಿ ಮೋದಿ ಸರಕಾರ ನೀಡುತ್ತೇವೆ ಎಂದು ಬಿಜೆಪಿ ಮುಖಂಡರು ಹೇಳಿಕೆ ನೀಡಿದ್ದಾರೆ.
 
ಮಹಾರಾಷ್ಟ್ರದ ಜನತೆ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಮಂತ್ರಕ್ಕಾಗಿ ಪರವಾಗಿ ಮತ ನೀಡಿದ್ದಾರೆ ಎಂದು ಕಿರ್ತಿ ಸೋಮಯ್ಯ ಹೇಳಿದ್ದಾರೆ.
 
ಮಹಾರಾಷ್ಟ್ರದ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ನರೇಂದ್ರ ಮೋದಿಯವರನ್ನು ಬೆಂಬಲಿಸಿದ್ದಾರೆ ಎಂದು ತಿಳಿಸಿದ್ದಾರೆ.  
 
ಬಿಜೆಪಿ ಪಕ್ಷ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡರೂ ರಾಜ್ಯವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸುವುದೇ ಪಕ್ಷದ ಮುಖ್ಯ ಗುರಿಯಾಗಿದೆ. ಮೋದಿ ಕೇಂದ್ರದಲ್ಲಿ ಅಧಿಕಾರ ನಡೆಸಿದಂತೆ ರಾಜ್ಯದಲ್ಲೂ ಮಿನಿ ಮೋದಿ ಸರಕಾರ ಅಧಿಕಾರ ನಡಿಸಲಿದೆ ಎಂದರು.
 
ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಪಕ್ಷದ ಕೇಂದ್ರ ಸಮಿತಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಬಿಜೆಪಿ ಮುಖಂಡ ಕೀರ್ತಿ ಸೋಮಯ್ಯ ತಿಳಿಸಿದ್ದಾರೆ.
 
 

ವೆಬ್ದುನಿಯಾವನ್ನು ಓದಿ