ಬಿಜೆಪಿ ಪರ ನಿಂತ್ರಾ ವಿಂಗ್ ಕಮಾಂಡರ್ ಅಭಿನಂದನ್?

ಮಂಗಳವಾರ, 16 ಏಪ್ರಿಲ್ 2019 (14:13 IST)
ನವದೆಹಲಿ : ಶತ್ರು ಯುದ್ಧ ವಿಮಾನವನ್ನು ಹೊಡೆದುರುಳಿಸುವ ಭರದಲ್ಲಿ ಶತ್ರುಗಳ ಸೆರೆಯಾಗಿ ಹಿಂಸೆ ಅನುಭವಿಸಿ ಮತ್ತೆ ತಾಯ್ನಾಡಿಗೆ ಹಿಂದುರಿಗಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


ಹೌದು. ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಲಾಗಿದೆ. ಇದು ವೈರಲ್ ಆಗಿದ್ದು, ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದಾರಾ ಎಂಬ ಅನುಮಾನ ಜನರಲ್ಲಿ ಮೂಡಿತ್ತು.


ಆದರೆ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ತಿಳಿಸಿದ್ದು, ಅಭಿನಂದನ್ ಅವರನ್ನೇ ಹೋಲುವ ಈತನಿಗೆ ಮುಖದಲ್ಲಿನ ವ್ಯತ್ಯಾಸಗಳು ಸ್ಪಷ್ಟವಾಗಿ ಗೋಚರಿಸಬಾರದೆಂಬ ಕಾರಣಕ್ಕೆ ಆತನಿಗೆ ದೊಡ್ಡದಾದ ಕನ್ನಡಕವನ್ನು ಹಾಕಿದ್ದಾರೆ ಎಂದು ಹೇಳಿದೆ.


ಅಷ್ಟೇ ಅಲ್ಲದೇ ಸೇವಾ ನಿಯಮಾವಳಿಗಳ ಪ್ರಕಾರ ಅಧಿಕಾರಿಗಳು ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡುವ ಸಾಧ್ಯತೆಗಳಿಲ್ಲ. ಹೀಗಾಗಿ ಅಭಿನಂದನ್ ಅವರನ್ನು ಹೋಲುವ ವ್ಯಕ್ತಿಯ ಫೋಟೋ ಹಾಕಿ ಅವರೆಂದು ಬಿಂಬಿಸಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ