ಬೈಕ್ ನಲ್ಲಿ ತೆರಳುತ್ತಿದ್ದ ಯುವತಿಯ ಎಳೆದೊಯ್ದು ಅತ್ಯಾಚಾರ
ತನ್ನ ಬಾವನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಯುವತಿಯನ್ನು ಕಾಡಿನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ತಡೆಯಲು ಬಂದ ಸಂಬಂಧಿಯನ್ನು ಹೊಡೆದು ಹಲ್ಲೆ ಮಾಡಿದ್ದಾರೆ.
ಬಳಿಕ ಸಂಬಂಧಿ ಸ್ಥಳೀಯರ ನೆರವಿನೊಂದಿಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.