ಗಂಡು ಮಗುವಿಗಾಗಿ ಮಹಿಳೆಗೆ ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡಲು ಒತ್ತಾಯ!

ಮಂಗಳವಾರ, 23 ಆಗಸ್ಟ್ 2022 (09:40 IST)
ಪುಣೆ: ಗಂಡು ಮಗು ಬೇಕೆಂಬ ದುರಾಸೆಗೆ ಬಿದ್ದು, ಜನ ಏನೆಲ್ಲಾ ಅಪರಾಧ ಮಾಡುತ್ತಾರೆ. ಅಂತಹದ್ದೇ ಒಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಗಂಡು ಮಗುವಾಗಬೇಕೆಂದು ಗರ್ಭಿಣಿ ಮಹಿಳೆಯೊಬ್ಬರನ್ನು ಗಂಡ, ಅತ್ತೆ ಸೇರಿದಂತೆ ಕುಟುಂಬಸ್ಥರೇ ಮಾಂತ್ರಿಕನ ಮಾತು ಕೇಳಿ ಸಾರ್ವಜನಿಕವಾಗಿ ಬೆತ್ತಲೆಯಾಗಿ ಸ್ನಾನ ಮಾಡಲು ಒತ್ತಾಯಿಸಿದ ಘಟನೆ ನಡೆದಿದೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆಗೆ ಈ ಮೊದಲೂ ಅನೇಕ ಬಾರಿ ಗಂಡು ಮಗು ಬೇಕೆಂಬ ದುರಾಸೆಯಿಂದ ಮಾಂತ್ರಿಕನಿಂದ ಚಿತ್ರ ಹಿಂಸೆ ನೀಡಲಾಗುತ್ತಿತ್ತು ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ