ಅನೈತಿಕ ಸಂಬಂಧವಿಟ್ಟುಕೊಂಡಿದ್ದ ವಿವಾಹಿತ ಮಹಿಳೆಗೆ ಚಪ್ಪಲಿ ಹಾರದ ಮೆರವಣಿಗೆ

ಬುಧವಾರ, 6 ಜುಲೈ 2022 (09:50 IST)
ಮಧ‍್ಯಪ್ರದೇಶ: ಅಕ್ರಮ ಸಂಬಂಧವಿಟ್ಟುಕೊಂಡಿದ್ದ 26 ವರ್ಷದ ವಿವಾಹಿತ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ದೌರ್ಜನ್ಯವೆಸಗಲಾಗಿದೆ.

ಮಹಿಳೆ ನಾಪತ್ತೆಯಾಗಿರುವ ಬಗ್ಗೆ ಪತಿ ದೂರು ನೀಡಿದ್ದ. ಆದರೆ ಬಳಿಕ ಆಕೆ ಪ್ರಿಯಕರನೊಂದಿಗೆ ಸಿಕ್ಕಿಬಿದ್ದಿದ್ದಳು. ಹೀಗಾಗಿ ಪತಿ ಮತ್ತು ಗ್ರಾಮಸ್ಥರು ಸೇರಿಕೊಂಡು ಆಕೆಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಬಳಿಕ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದಾರೆ.

ಇದಕ್ಕೆ ಮಹಿಳೆಯ ಮೂವರು ಮಕ್ಕಳೂ ಮೂಕ ಸಾಕ್ಷಿಗಳಾಗಿದ್ದಾರೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೇ ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ