ಮಹಿಳೆ ತನ್ನ ಗೆಳೆಯನನ್ನು ಭೇಟಿ ಮಾಡಲು ಕನ್ಹಾಟ್ ಪ್ರದೇಶಕ್ಕೆ ತೆರಳಿದ್ದಳು. ನಂತರ ಬೆಳಗಿನ ಜಾವ 2 ಗಂಟೆಗೆ ಮನೆಗೆ ಮರಳುತ್ತಿರುವಾಗ, ಆರೋಪಿಗಳು ಮನೆಯ ಬಳಿಯೇ ಆಕೆಯನ್ನು ಸ್ವಿಫ್ಟ್ ಕಾರಿನಲ್ಲಿ ಅಪಹರಿಸಿ 20 ಕಿ.ಮೀ ದೂರದಲ್ಲಿರುವ ನಜಾಫ್‌ಗಢ್ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಲಿಸುತ್ತಿರುವ ಕಾರಿನಲ್ಲಿಯೇ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದಾರಿಹೋಕರ ನೆರವು ಪಡೆದ ಮಹಿಳೆ ಪೊಲೀಸ್ ಠಾಣೆಗೆ ತೆರಳಿ ಮೂವರು ಆರೋಪಿಗಳ ವಿರುದ್ಧ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.