ಹೊಸ ವರ್ಷಾಚರಣೆಯಂದು ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿ ಹತ್ಯೆಗೈದ ಕಾಮುಕರು

ಬುಧವಾರ, 4 ಜನವರಿ 2017 (16:08 IST)
ಓರಿಸ್ಸಾ ಮೂಲದ 30 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಹೇಯ ಘಟನೆ ಕೇರಳದಲ್ಲಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
 
ಹೊಸ ವರ್ಷಾಚರಣೆಯ ದಿನದಂದು 30 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಇಬ್ಬರು ಆರೋಪಿಗಳು ಆಕೆಯನ್ನು ಮನಬಂದಂತೆ ಥಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಜಿಲ್ಲೆಯ ಕುಟ್ಟಿಕನಮ್ ಪ್ರದೇಶದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಆಕೆಯ ತಲೆಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿ ಹತ್ಯೆಗೈಯಲಾಗಿದೆ ಎನ್ನಲಾಗಿದೆ.
 
ಒರಿಸ್ಸಾ ಮತ್ತು ತಮಿಳುನಾಡು ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರೋಪಿಗಳು ಮಹಿಳೆಯ ನೆರೆಹೊರೆಯವರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ