ಅಕ್ರಮ ಸಂಬಂಧ ಮಾಡಿದ್ದಕ್ಕೆ ಸಾಮೂಹಿಕ ಅತ್ಯಾಚಾರದ ಶಿಕ್ಷೆ!

ಮಂಗಳವಾರ, 21 ಡಿಸೆಂಬರ್ 2021 (11:39 IST)
ಹೈದರಾಬಾದ್: ಅಕ್ರಮ ಸಂಬಂಧ ಹೊಂದಿದ ತಪ್ಪಿಗೆ ಮಹಿಳೆ ಮೇಲೆ ಇಬ್ಬರು ಕಾಮುಕರು ಗ್ಯಾಂಗ್ ರೇಪ್ ಮಾಡಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಕಾಮಗಾರಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಸಹ ನೌಕರನೊಂದಿಗೆ ಸಂಬಂಧವಿತ್ತು. ಇಬ್ಬರೂ ಜೊತೆಯಾಗಿ ತೆರಳುತ್ತಿದ್ದಾಗ ಇಬ್ಬರು ಆರೋಪಿಗಳು ಅವರನ್ನು ತಡೆದು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು.

ಬಳಿಕ ಇಬ್ಬರೂ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದರು. ಒಂದು ವೇಳೆ ಬಹಿರಂಗಪಡಿಸಿದರೆ ಇಬ್ಬರ ಅಕ್ರಮ ಸಂಬಂಧ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಬೇಸತ್ತು ಇಬ್ಬರೂ ಆತ್ಮಹತ್ಯೆಗೆ ಮುಂದಾಗಿದ್ದರು. ಆದರೆ ಅಷ್ಟರಲ್ಲಿ ಇಬ್ಬರನ್ನೂ ಸ್ಥಳೀಯರು ರಕ್ಷಿಸಿದ್ದರು. ಇದೀಗ ಪೊಲೀಸರು ಇಬ್ಬರೂ ಪ್ರೇಮಿಗಳನ್ನು ವಶಕ್ಕೆ ಪಡೆದಿದ್ದು, ಅತ್ಯಾಚಾರವೆಸಗಿದ ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ