ಬಿಜೆಪಿ ಮುಖಂಡನಿಂದ ಮಹಿಳೆಯ ಮೇಲೆ ಅತ್ಯಾಚಾರ

ಸೋಮವಾರ, 1 ಫೆಬ್ರವರಿ 2016 (17:02 IST)
ಬಿಜೆಪಿ ಮುಖಂಡನಾದ ಸಹೋದರ ಮಾವನೊಬ್ಬ ಅತ್ಯಾಚಾರ ಎಸಗಿದ್ದರಿಂದ ಮನನೊಂದ ಮಹಿಳೆಯೊಬ್ಬಳು ತನ್ನನ್ನು ತಾನೇ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಹೇಯ ಘಟನೆ ವರದಿಯಾಗಿದೆ.ಘಟನೆ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
 ಮಹಿಳೆ ಮನೆಯಲ್ಲಿ ಏಕಾಂಗಿಯಾಗಿದ್ದಾಗ ಸಹೋದರಮಾವ ನರೋತ್ತಮ್ ತಿವಾರಿ, ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದನು. ಇದರಿಂದ ಬೇಸತ್ತು ಆಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಘಟನೆ ತುಂಬಾ ವಿಳಂಬವಾಗಿ ಬೆಳಕಿಗೆ ಬಂದಿದೆ. ಡಿಸೆಂಬರ್ 20 2015 ರಂದು ಬಿಜೆಪಿ ಮುಖಂಡ ತಿವಾರ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಜನೆವರಿ 29 ರಂದು ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 
 
ಆರೋಪಿ ನರೋತ್ತಮ್ ತಿವಾರಿ ಸ್ಥಳೀಯ ಬಿಜೆಪಿ ಮುಖಂಡನಾಗಿದ್ದು, ಆತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ