ಖಾಸಗಿ ಫೋಟೋ ಕಳುಹಿಸಿ ಎಡವಟ್ಟು ಮಾಡಿಕೊಂಡ ಯುವತಿ

ಬುಧವಾರ, 26 ಆಗಸ್ಟ್ 2020 (10:12 IST)
ಪುಣೆ: ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ತನ್ನ ಖಾಸಗಿ ಫೋಟೋಗಳನ್ನು ಸೋಷಿಯಲ್ ಮೀಡಿಯಾ ಫ್ರೆಂಡ್ ಗೆ ಅಕಸ್ಮಾತ್ತಾಗಿ ಕಳುಹಿಸಿ ಎಡವಟ್ಟು ಮಾಡಿಕೊಂಡಿದ್ದಾಳೆ. ಇದೀಗ ಗೆಳೆಯ ಫೋಟೋ ಡಿಲೀಟ್ ಮಾಡಲು ಭಾರೀ ಮೊತ್ತದ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದಾನೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.


ಆಕಸ್ಮಿಕವಾಗಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿರುವ ವ್ಯಕ್ತಿಗೆ ರವಾನೆಯಾಗಿದೆ. ಇದು ಆಕಸ್ಮಿಕವಾಗಿ ನಡೆದಿದ್ದು ಫೋಟೋಗಳನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಾಗ ಆತ 40,000 ರೂ. ನೀಡಬೇಕು. ಇಲ್ಲದೇ ಹೋದರೆ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ