ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯ ಜೀವಂತ ಸುಟ್ಟ ಪಾಪಿ

ಸೋಮವಾರ, 29 ಆಗಸ್ಟ್ 2022 (10:30 IST)
ನವದೆಹಲಿ: ಮದುವೆ ಪ್ರಪೋಸಲ್ ನಿರಾಕರಿಸಿದ್ದಕ್ಕೆ 19 ವರ್ಷದ ಯುವತಿಯನ್ನು ಪಾಪಿ ಜೀವಂತ ದಹನ ಮಾಡಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ತನ್ನ ಮನೆಯಲ್ಲಿ ಯುವತಿ ಮಲಗಿ ನಿದ್ರಿಸುತ್ತಿದ್ದಾಗ ಆರೋಪಿ ಬೆಂಕಿ ಹಚ್ಚಿದ್ದಾನೆ. ಪರಿಣಾಮ ತೀವ್ರ ಸುಟ್ಟ ಗಾಯಗಳಿಂದಾಗಿ ಯುವತಿ ಸಾವನ್ನಪ್ಪಿದ್ದಾಳೆ.

ಸಂತ್ರಸ್ತ ಯುವತಿ 12 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. 10 ವರ್ಷಗಳ ಹಿಂದೆ ಇಬ್ಬರಿಗೂ ಪರಿಚಯವಾಗಿತ್ತು. ಆದರೆ ಆರೋಪಿ ಜೊತೆ ಪ್ರೇಮ ಸಂಬಂಧಕ್ಕೆ ಯುವತಿ ನಿರಾಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ