ಮುಂಬೈ: ಮೊದಲ ಬಾರಿಗೆ ಡೇಟಿಂಗ್ ಮಾಡಲು ಬಂದಾಗ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.
29 ವರ್ಷದ ಆರ್ ಡೇಡಿಯಾ ಬಂಧಿತ. ಈತ ಡೇಟಿಂಗ್ ಆಪ್ ಮೂಲಕ ಮಹಿಳೆಯ ಪರಿಚಯ ಮಾಡಿಕೊಂಡಿದ್ದ. ಅದರಂತೆ ಇಬ್ಬರೂ ಮಾತನಾಡಿಕೊಂಡು ಬಾಂದ್ರಾದಲ್ಲಿ ಮೊದಲ ಬಾರಿ ಭೇಟಿಯಾಗಿದ್ದರು. ಈ ವೇಳೆ ಇಬ್ಬರೂ ಪಬ್ ಒಂದಕ್ಕೆ ತೆರಳಿದ್ದರು. ಈ ವೇಳೆ ಡೇಡಿಯಾ ಬಿಯರ್ ಸೇವನೆ ಮಾಡಿದ್ದ.
ಇದಾದ ಬಳಿಕ ಆತ ಅಸಭ್ಯವಾಗಿ ವರ್ತಿಸಲು ಆರಂಭಿಸಿ. ಕಾರಿನಲ್ಲಿ ಡ್ರಾಪ್ ಮಾಡುವುದಾಗಿ ಹೇಳಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದ. ಇದೀಗ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.