ಹಿಜಬ್ ಧರಿಸದ ಮಹಿಳೆಯರು ಪ್ರಾಣಿಗಳಂತೆ ಕಾಣ್ತಾರೆ : ತಾಲಿಬಾನ್

ಶುಕ್ರವಾರ, 17 ಜೂನ್ 2022 (09:32 IST)
ಕಾಬೂಲ್ : ತಮ್ಮ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಇಸ್ಲಾಮಿಕ್ ಹಿಜಬ್ ಧರಿಸದ ಮುಸ್ಲಿಂ ಮಹಿಳೆಯರು,

ಪ್ರಾಣಿಗಳಂತೆ ಕಾಣಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ತಾಲಿಬಾನ್ನ ಧಾರ್ಮಿಕ  ಪೊಲೀಸರು ದಕ್ಷಿಣ ಅಫ್ಘಾನಿಸ್ತಾನದ ಕಂದಹಾರ್ ನಗರದಾದ್ಯಂತ ಪೋಸ್ಟರ್ಗಳನ್ನು ಹಾಕಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ನಲ್ಲಿ ಆಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ, ಅಫ್ಘಾನ್ ಮಹಿಳೆಯರ ಮೇಲೆ ತಾಲಿಬಾನ್ ಕಠಿಣ ನಿರ್ಬಂಧಗಳನ್ನು ಹೇರಿದೆ. ಮೇ ತಿಂಗಳಲ್ಲಿ ತಾಲಿಬಾನ್ ಮುಖ್ಯಸ್ಥ ಹಿಬತುಲ್ಲಾ ಅಖುಂಡ್ಜಾದಾ, ಮಹಿಳೆಯರು ಮನೆಯಲ್ಲಿಯೇ ಇರಬೇಕು.

ಒಂದು ವೇಳೆ ಮನೆಯಿಂದ ಹೊರಗೆ ಹೋಗಬೇಕಾದರೆ, ತಮ್ಮ ಮುಖ ಸೇರಿದಂತೆ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಹಿಜಬ್ ಧರಿಸಿ ಹೋಗಬೇಕು ಎಂದು ಆದೇಶ ಹೊರಡಿಸಿದ್ದರು.  ಇದೀಗ ತಾಲಿಬಾನ್ನ ಸಚಿವಾಲಯವು ಇಸ್ಲಾಂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವ ಮೂಲಕ ಕಂದಹಾರ್ ನಗರದಾದ್ಯಂತ ಪೋಸ್ಟರ್ಗಳನ್ನು ಹಾಕಿದೆ.

ಪೋಸ್ಟರ್ನಲ್ಲಿ ಮಹಿಳೆಯರ ದೇಹವನ್ನು ತಲೆಯಿಂದ ಕಾಲಿನವರೆಗೂ ಮುಚ್ಚಲ್ಪಡುವ ಬುರ್ಖಾಗಳ ಫೋಟೋಗಳನ್ನು ಕಾಣಬಹುದಾಗಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ