ವಿಶ್ವದ ಮೊದಲ ಡಿಎನ್ಎ ಆಧಾರಿತ ಲಸಿಕೆ ನಿಜಕ್ಕೂ ಮಹತ್ವದ ಸಾಧನೆ: ಮೋದಿ
ಶನಿವಾರ, 21 ಆಗಸ್ಟ್ 2021 (13:38 IST)
ನವದೆಹಲಿ: ಜಗತ್ತಿನ ಮೊದಲ ಡಿಎನ್ಎ ಆಧಾರಿತ ಕೋವಿಡ್ ಲಸಿಕೆ ಝೈಡಸ್ ಕ್ಯಾಡಿಲಾ ಸಂಸ್ಥೆಯ ಝೈಕೋವ್-ಡಿ ಕೋವಿಡ್ ಲಸಿಕೆಗೆ ತುರ್ತು ಬಳಕೆಯ ಅನುಮೋದನೆ ನೀಡಿದ ಬೆನ್ನಲ್ಲೇ ಲಸಿಕೆ ತಯಾರಿಕೆಗೆ ಶ್ರಮಿಸಿದ ವಿಜ್ಞಾನಿಗಳನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ವಿಶ್ವದ ಮೊದಲ ಡಿಎನ್ಎ ಆಧಾರಿತ ಝೈಡಸ್ ಕ್ಯಾಡಿಲಾದ ಝೈಕೋವ್-ಡಿ' ಲಸಿಕೆಗೆ ಅನುಮೋದನೆ ದೊರೆತ ಬೆನ್ನಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭಾರತದ ವಿಜ್ಞಾನಿಗಳ ನವೀನ ಉತ್ಸಾಹಕ್ಕೆ ಇದು ಸಾಕ್ಷಿಯಾಗಿದೆ. ನಿಜಕ್ಕೂ ಮಹತ್ವದ ಸಾಧನೆಯಾಗಿದೆ ಎಂದು ಹೇಳಿದ್ದಾರೆ.