ಯಾಸ್ ಚಂಡಮಾರುತ ಅಪ್ಪಳಿಸುವ ಹಿನ್ನಲೆ; ಅಧಿಕಾರಿಗಳ ಜೊತೆ ಇಂದು ಸಭೆ ಕರೆದ ಪ್ರಧಾನಿ ಮೋದಿ
ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದು, ಇದರಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು, ದೂರ ಸಂಪರ್ಕ, ವಿದ್ಯುತ್ , ನಾಗರಿಕ ವಿಮಾನಯಾನ, ಭೂ ವಿಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅಮಿತ್ ಶಾ ಕೂಡ ಭಾಗವಹಿಸಲಿದ್ದಾರೆ ಎನ್ನಲಾಗಿದೆ.