ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಯಾರು ನಮ್ಮ ದೇಶದ ಪ್ರಧಾನಿ ಹುದ್ದೆಗೇರಲಿದ್ದಾರೆ ಎಂದು ನೊಣವಿನಕೆರೆಯ ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಅವರ ಈ ಭವಿಷ್ಯವಾಣಿ ವೈರಲ್ ಆಗಿದೆ. ಈ ಬಾರಿ ದೇಶಕ್ಕೆ ಮಹಿಳೆಯೊಬ್ಬರು ಪ್ರಧಾನಿ ಹುದ್ದೆಗೇರಲಿದ್ದಾರೆ. ಬಳಿಕ ಅವರು ಪುರುಷರೊಬ್ಬರಿಗೆ ಸ್ಥಾನ ಬಿಟ್ಟುಕೊಡಲಿದ್ದಾರೆ ಎಂದು ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಈ ಮೊದಲು ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಗೆ 135 ಸೀಟುಗಳು ಸಿಗಲಿದೆ ಎಂದು ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದರು. ಅದರಂತೆಯೇ ಆಗಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕ ಗಾಂಧಿ ಗೆಲ್ಲಲಿದ್ದಾರೆ. ಪುರುಷನ ವಿರುದ್ಧ ದುರ್ಗಿಯಂತೆ ನಿಂತು ತಾನೇ ಪ್ರಧಾನಿ ಪಟ್ಟಕ್ಕೇರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಅವರ ಈ ಭವಿಷ್ಯದ ಪ್ರಕಾರ ಪ್ರಿಯಾಂಕ ಗಾಂಧಿ ಪ್ರಧಾನಿ ಹುದ್ದೆಗೇರಿ ಬಳಿಕ ಆ ಸ್ಥಾನವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಡಲಿದ್ದಾರೆ. ಶಿವರಾತ್ರಿಗೆ ಮುನ್ನ ಚುನಾವಣೆ ನಡೆದಿದ್ದರೆ ಈಗಿನ ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಯೋಗವಿತ್ತು. ಆದರೆ ನಂತರ ನಡೆಯುವ ಕಾರಣ ಅನ್ಯ ಪಕ್ಷಗಳ ಸಹಾಯದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಬಹುದು ಎಂದಿದ್ದಾರೆ.