ಯಡಿಯೂರಪ್ಪ ಡಿ ನೋಟಿಫಿಕೇಷನ್ ಪ್ರಕರಣ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

ಸೋಮವಾರ, 5 ಫೆಬ್ರವರಿ 2018 (20:48 IST)

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಕ್ರಮ ಡಿ ನೋಟಿಫಿಕೇಷನ್ ಪ್ರಕರಣದ ವಿಚಾರಣೆಯಿಂದ ಸುಪ್ರೀಂಕೋರ್ಟಿನ ನ್ಯಾಯಮೂರ್ತಿ ಚಲಮೇಶ್ವರ್ ಅವರು ಹಿಂದೆ ಸರಿದ್ದಾರೆ.

ಯಡಿಯೂರಪ್ಪ ವಿರುದ್ಧ 15 ಡಿ ನೋಟಿಫಿಕೇಷನ್ ಪ್ರಕರಣಗಳನ್ನು ಬೇರೆ ಪೀಠದಲ್ಲಿ ವಿಚಾರಣೆ ನಡೆಸುವಂತೆ ಮುಖ್ಯನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ.

ಹೈಕೋರ್ಟಿನಲ್ಲಿ ರದ್ದುಪಡಿಸಿದ ಡಿ ನೋಟಿಫಿಕೇಷನ್ ಪ್ರಕರಣಗಳನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಲಾಗಿತ್ತು. ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿಯವರು ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ