ವಿಜಯಪುರ, ಬಾಗಲಕೋಟೆಯಿಂದ ಚುನಾವಣೆಗೆ ಸ್ಪರ್ಧೆ: ಯಡಿಯೂರಪ್ಪ

ಭಾನುವಾರ, 17 ಸೆಪ್ಟಂಬರ್ 2017 (11:34 IST)
ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆಯಿಂದ ಚುನಾವಣೆಗೆ ಸ್ಪರ್ಧೆಸಲು ಚಿಂತನೆ ನಡೆಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಾನು ಉತ್ತರ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸಿದಲ್ಲಿ ನೆರೆಯ 10 ರಿಂದ 12 ಜಿಲ್ಲೆಗಳಲ್ಲಿ ಪಕ್ಷಕ್ಕೆ ಲಾಭವಾಗಲಿದೆ. ಆದ್ದರಿಂದ, ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
 
ವಿಜಯಪುರ, ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಒತ್ತಡವಿದೆ ಆದಾಗ್ಯೂ ಪಕ್ಷದ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೇ ಅದಕ್ಕೆ ಬದ್ಧವಾಗಿದ್ದೇನೆ ಎಂದರು.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 150 ಸ್ಥಾನ ಗೆಲ್ಲಲೇಬೇಕು ಎನ್ನುವ ಗುರಿಯಿದೆ. ಮುಂದಿನ ಬಾರಿ ಬಿಜೆಪಿ ಸರಕಾರ ರಚಿಸುವುದು ಖಚಿತವಾಗಿದೆ. ಜನವಿರೋಧಿ, ರೈತ ವಿರೋಧಿ ಸರಕಾರವನ್ನು ಮತದಾರರು ಕಿತ್ತೊಗೆಯಲಿದ್ದಾರೆ ಎಂದು  ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ