ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ, ಮೊದಲ ಬಾರಿ ಈಜಿಪ್ಟ್‌ಗೆ ನಮೋ

ಸೋಮವಾರ, 19 ಜೂನ್ 2023 (12:23 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 20ರಿಂದ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು ಜೂನ್ 22 ರಂದು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
 
ಮೋದಿ ಅದೇ ದಿನ ಯುಎಸ್ ಕಾಂಗ್ರೆಸ್ನ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಾಷಿಂಗ್ಟನ್ನಲ್ಲಿ ಮೋದಿ ಪ್ರಮುಖ ಸಿಇಒಗಳು, ವೃತ್ತಿಪರರು, ಇತರೆ ಉದ್ಯಮಿಗಳ ಜೊತೆ ಸಂವಾದಗಳನ್ನು ನಡೆಸಲು ನಿರ್ಧರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಡಾ. ಜಿಲ್ ಬೈಡನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ. ಜೂನ್ 21 ರಂದು ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯನ್ನು ಪ್ರಧಾನ ಮಂತ್ರಿ ಮೋದಿ ಮುನ್ನಡೆಸಲಿದ್ದಾರೆ.

ಜೂನ್ 21 ರಂದು ಆಚರಿಸಲಾಗುವ 9ನೇ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಮೊದಲ ಬಾರಿಗೆ ಯೋಗ ಅಧಿವೇಶನವನ್ನು ಮುನ್ನಡೆಸಲಿದ್ದಾರೆ. ಯೋಗಾಭ್ಯಾಸದ ಅನೇಕ ಪ್ರಯೋಜನಗಳ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸುವ ಗುರಿಯನ್ನು ಅಂತಾರಾಷ್ಟ್ರೀಯ ಯೋಗ ದಿನ ಹೊಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ