ಶ್ರೀರಾಮನ ಅವತಾರದಲ್ಲಿ ಯೋಗಿ ಆದಿತ್ಯನಾಥ್

ಮಂಗಳವಾರ, 20 ಸೆಪ್ಟಂಬರ್ 2022 (06:59 IST)
ಲಕ್ನೋ : ರಾಮ ಮಂದಿರ ನಿರ್ಮಾಣ ಹಂತದಲ್ಲಿರುವ ನಡುವೆಯೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಯೋಧ್ಯೆಯಲ್ಲಿ ಪ್ರತ್ಯೇಕ ದೇಗುಲವನ್ನೇ ನಿರ್ಮಾಣ ಮಾಡಲಾಗಿದೆ.
 
ಯೋಗಿ ಆದಿತ್ಯನಾಥ್ ಅವರ ಪ್ರತಿಮೆಗೆ ವ್ಯಕ್ತಿಯೊಬ್ಬರು ಪೂಜೆ ಮಾಡುತ್ತಿರುವ ಚಿತ್ರಗಳು ಹಾಗೂ ದೇವಸ್ಥಾನದಲ್ಲಿ ನಿರ್ಮಿಸಲಾಗಿರುವ ಯೋಗಿ ಮೂರ್ತಿಯ ಚಿತ್ರಗಳು ಜಾಲತಾಣದಲ್ಲಿ ವೈರಲ್ ಆಗಿವೆ.

ರಾಮಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ವೆಚ್ಚ ಆಗಿದೆ. ರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ.40ಕ್ಕೂ ಹೆಚ್ಚು ಭಾಗ ಪೂರ್ಣಗೊಂಡಿದೆ. 2023ರ ಡಿಸೆಂಬರ್ನಿಂದ ಭಕ್ತರು ದೇವರಿಗೆ ಪೂಜೆ ಅರ್ಪಿಸಲು ಅವಕಾಶ ನೀಡಲು ಸಾಧ್ಯವಾಗುವ ನಿರೀಕ್ಷೆ ಇದೆ ಎಂದು ಶ್ರೀ ರಾಮಜನ್ಮಭೂಮಿ ಟ್ರಸ್ಟ್ನ ಅಧಿಕಾರಿಗಳು ಇತ್ತೀಚೆಗೆ ತಿಳಿಸಿದ್ದರು. 

ಈ ದೇವಸ್ಥಾನದಲ್ಲಿ ಪ್ರತಿದಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಎರಡು ಬಾರಿ ವಿಷೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಪ್ರಾರ್ಥನೆಯ ನಂತರ, ಭಕ್ತರಿಗೆ ಪ್ರಸಾದವನ್ನೂ ವಿತರಿಸಲಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ