ಅಯೋಧ್ಯೆಯಲ್ಲಿ ಶ‍್ರೀರಾಮ ಮೂರ್ತಿ ಸ್ಥಾಪನೆ…!
ಉತ್ತರ ಪ್ರದೇಶ: ಅಯೋಧ್ಯೆಯ ಸರಯೂ ನದಿ ತೀರದಲ್ಲಿ ನೂರು ಮೀಟರ್ ಎತ್ತರದ ಶ್ರೀರಾಮ ದೇವರಮೂರ್ತಿ ಸ್ಥಾಪಿಸಲು ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸಿದೆ.
ಯುಪಿ ಪ್ರವಾಸೋದ್ಯಮ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಟೂರಿಸಂ ಬುಕ್‌ಲೆಟ್‌ನಲ್ಲಿ ಆಗ್ರಾದ ತಾಜ್ ಮಹಲ್ ನ್ನು ಕೈಬಿಟ್ಟು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಈಗ ಅಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಸ್ಥಾಪಿಸುವ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು, ಹೊಸ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂದು ಮಾಧ್ಯಮ ವರದಿ ಮಾಡಿವೆ.