ಮದುವೆಯಾಗಲು ನಿರಾಕರಿಸಿದ ಯುವತಿಯ ಮೇಲೆ ಗ್ಯಾಂಗ್‌ರೇಪ್

ಶುಕ್ರವಾರ, 10 ನವೆಂಬರ್ 2023 (13:59 IST)
ಮದುವೆಯಾಗಲು ನಿರಾಕರಿಸಿದ ಯುವತಿಯ ಮೇಲೆ ಗ್ಯಾಂಗ್‌ರೇಪ್  ಎಸಗಿದ ಆರೋಪಿಗಳಲ್ಲಿ ಒಬ್ಬನನ್ನು ಷಹಜಹಾನ್ ಎಂದು ಗುರುತಿಸಲಾಗಿದ್ದು, ಆತ ಪೀಡಿತೆಯನ್ನು ಮದುವೆಯಾಗುವ ಇಚ್ಛೆ ಹೊಂದಿದ್ದ ಎಂದು ಹೇಳಲಾಗುತ್ತಿದೆ. ಆರೋಪಿಗಳನ್ನು ಬಂಧಿಸಲಾಗಿದ್ದು,  ಅವರು ಪೀಡಿತಳ ನೆರೆಮನೆಯ ನಿವಾಸಿಗಳು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
 
 ಆರೋಪಿಗಳ ಕರಾಳ ಹಿಡಿತದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಆಕೆಯ ಮೇಲೆ ಅವರು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. 
 
ಈಶಾನ್ಯ ಭಾರತೀಯ ಮೂಲದ 30 ವರ್ಷದ ಮಹಿಳೆಯೊಬ್ಬರ ಮೇಲೆ  ನಾಲ್ಕು ಜನ ಕೀಚಕ ಮನೋಸ್ಥಿತಿಯವರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮುಂಡ್ಕಾದಲ್ಲಿ ನಡೆದಿದೆ. ಅಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಆಕೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಲ್ಲದೇ, ಆಕೆಯ ಗುಪ್ತಾಂಗದಲ್ಲಿ ಕೋಲನ್ನು ತೂರುವುದರ ಮೂಲಕ ಪೈಶಾಚಿಕತೆಯನ್ನು ಮೆರೆದಿದ್ದಾರೆ.
 
ಆಕೆಯ ಮನೆಯಲ್ಲಿಯೇ ಈ ಘಟನೆ ನಡೆದಿದೆ. ವಿಪರೀತ ರಕ್ತಸ್ರಾವವಾಗುತ್ತಿದ್ದ ಆಕೆಯನ್ನು ಅಲ್ಲಿಯೇ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ರಕ್ಷಣೆಗಾಗಿ ಆಕೆ ಕೂಗಿಕೊಳ್ಳುತ್ತಿರುವುದನ್ನು ಕೇಳಿಸಿಕೊಂಡ ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ಬಂದು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. 
 
ಆಕೆಯ ಜನನಾಂಗಗಳ  ಮೇಲೆ ಗಂಭೀರ ಗಾಯಗಳಾಗಿದ್ದು, ಸೂಕ್ತ ಚಿಕಿತ್ಸೆ ನೀಡಿ ಆಕೆಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ