ನಗ್ನ ಫೋಟೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವ ಅಂದರ್
ಇನ್ ಸ್ಟಾಗ್ರಾಂನಲ್ಲಿ ಬೇರೆ ಬೇರೆ ಹೆಸರಿನಲ್ಲಿ ಖಾತೆ ತೆರೆದು ಯುವತಿಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ ಆರೋಪಿ ಅವರ ನಗ್ನ, ಖಾಸಗಿ ಫೋಟೋಗಳನ್ನು ಕಳುಹಿಸುವಂತೆ ವಿನಂತಿಸುತ್ತಿದ್ದ.
ಬಳಿಕ ಆ ಫೋಟೋಗಳನ್ನು ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಒಂದು ವೇಳೆ ಹಣಕೊಡದೇ ಇದ್ದರೆ ಫೋಟೋ ಬಹಿರಂಗಗೊಳಿಸುವುದಾಗಿ ಬೆದರಿಸುತ್ತಿದ್ದ. ಈತನ ಕಾಟ ಸಹಿಸಲಾರದೇ ಬಾಲಕಿಯೊಬ್ಬಳು ಪೊಲೀಸರಿಗೆ ದೂರು ನೀಡಿದ್ದಳು. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.