ಯುವಕರಿಗೆ ಭಾರತ ಮಾತಾ ಕಿ ಜೈ ಎನ್ನುವುದನ್ನು ಕಲಿಸಬೇಕಾಗಿದೆ: ಮೋಹನ್ ಭಾಗವತ್

ಗುರುವಾರ, 3 ಮಾರ್ಚ್ 2016 (20:50 IST)
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಹೊಸಪೀಳಿಗೆಗೆ ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುವಂತೆ ಹೇಳುವ ಕಾಲ ಬಂದಿದೆ ಎಂದು ಹೇಳಿದ್ದಾರೆ. 
 
ಜೆಎನ್‌ಯು ವಿವಾದದ ಕುರಿತಂತೆ ನೇರವಾಗಿ ಉಲ್ಲೇಖಿಸದ ಭಾಗವತ್, ಕೆಲ ವಿಚ್ಚಿದ್ರಕಾರಿ ಶಕ್ತಿಗಳು ಭಾರತ್ ಮಾತಾ ಕಿ ಜೈ ಎಂದು ಹೇಳದಿರುವಂತೆ ಒತ್ತಡ ಹೇರುತ್ತಿರುವ ಹಿನ್ನೆಲೆಯಲ್ಲಿ, ಯುವಕರಿಗೆ ಭಾರತ್ ಮಾತಾ ಕಿ ಜೈ ಎನ್ನುವ ಘೋಷಣೆಗಳನ್ನು ಕೂಗುವಂತೆ ಹೇಳುವ ಕಾಲ ಸನ್ನಿಹಿತವಾಗಿದೆ ಎಂದು ತಿಳಿಸಿದ್ದಾರೆ.
 
ಕಳೆದ ತಿಂಗಳು ಸಂಸತ್ ದಾಳಿ ರೂವಾರಿ ಉಗ್ರ ಅಫ್ಜಲ್‌ ಗುರು ಪುಣ್ಯತಿಥಿ ಆಚರಣೆಯ ಕಾರ್ಯಕ್ರಮದಲ್ಲಿ ಕೆಲ ವಿದ್ಯಾರ್ಥಿಗಳು ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ದೇಶ ವಿರೋಧಿ ಘೋಷಣೆ ಕೂಗಿದ ವಿದ್ಯಾರ್ಥಿ ಸಂಘಧ ಅಧ್ಯಕ್ಷ ಕನೈಯ್ಯಾ ಕುಮಾರ್ ಸೇರಿದಂತೆ ಮೂವರು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಆರೋಪ ಹೊರಿಸಲಾಗಿದೆ.  
 
ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭಕ್ಕೆ ಆಗಮಿಸಿದ್ದ ಮೋಹನ್ ಭಾಗವತ್, ಸಾಮಾಜಿಕ ಕಾರ್ಯಕರ್ತ ಸಿಂಧುತಾಯಿ ಸಪ್ಕಲ್ ಅವರಿಗೆ ಮಾತ್ರಾಶಕ್ತಿ ಪ್ರಶಸ್ತಿ ನೀಡಿ ಗೌರವಿಸಿದರು.

ವೆಬ್ದುನಿಯಾವನ್ನು ಓದಿ