ಲವ್ ಪ್ರಪೋಸಲ್ ನಿರಾಕರಿಸಿದ್ದಕ್ಕೆ ಅಪ್ರಾಪ್ತೆಗೆ ಇರಿದ ಯುವಕ
16 ವರ್ಷದ ಪಿಯು ವಿದ್ಯಾರ್ಥಿನಿಯಾಗಿದ್ದ ಯುವತಿಯನ್ನು 22 ವರ್ಷದ ಯುವಕ ಪ್ರೀತಿಸುತ್ತಿದ್ದ. ಆದರೆ ಆಕೆ ನಿರಾಕರಿಸಿದ್ದಳು. ಇದರಿಂದಾಗಿ ಆಕೆಯ ಮೇಲೆ ಆಕ್ರೋಶಗೊಂಡಿದ್ದ ಯುವಕ 14 ಬಾರಿ ಇರಿದು ಕೊಲೆಗೆ ಯತ್ನಿಸಿದ್ದಾನೆ.
ಈ ಯುವಕನಿಗೆ ಅಪರಾಧ ಹಿನ್ನಲೆಯಿತ್ತು. ಈ ಮೊದಲು ಜೈಲಿನಿಂದ ರಿಲೀಸ್ ಆಗಿದ್ದ. ಈಗ ಅಪ್ರಾಪ್ತೆಯ ಬೆನ್ನುಬಿದ್ದಿದ್ದ. ಈ ಬಗ್ಗೆ ಬಾಲಕಿ ತನ್ನ ಆಪ್ತರಲ್ಲಿ ಹೇಳಿಕೊಂಡಿದ್ದಳು. ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ತೀವ್ರ ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.