ಕಣ್ಮರೆಯಾದ 22 ಯೋಧರಿಗಾಗಿ ತೀವ್ರ ಶೋಧ
ಮೇಘಸ್ಫೋಟದಿಂದಾಗಿ ಸಿಕ್ಕಿಂನ ತೀಸ್ತಾ ನದಿ ಉಕ್ಕೇರಿ ಹರಿದಿದ್ದರಿಂದಾಗಿ ಕಣ್ಮರೆಯಾಗಿರುವ 22 ಯೋಧರಿಗೆ ಸೇನಾ ಪಡೆಗಳು ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಈ ನಡುವೆ ಸಿಕ್ಕಿಂ ಜಲಪ್ರಳಯದಲ್ಲಿ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದರೆ, ನಾಪತ್ತೆಯಾದವರ ಸಂಖ್ಯೆ 102ಕ್ಕೆ ಮುಟ್ಟಿದೆ.ಸಿಕ್ಕಿಂನಲ್ಲಿ ಮಳೆಯಾಗುತ್ತಿರುವುದರಿಂದ ತೀಸ್ತಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹೀಗಾಗಿ ಕಣ್ಮರೆಯಾಗಿರುವ ಯೋಧರು ಹಾಗೂ ಸಾರ್ವಜನಿಕರ ಶೋಧ ಕಾರ್ಯಕ್ಕೆ ತೊಡಕಾಗಿದೆ. ಇದೆಲ್ಲದರ ನಡುವೆಯೂ ರಕ್ಷಣಾ ಪಡೆಗಳು 2011 ಮಂದಿಯನ್ನು ಅಪಾಯದಿಂದ ರಕ್ಷಿಸುವಲ್ಲಿ ಸಫಲವಾಗಿವೆ.ಇನ್ನು 22,034 ಮಂದಿ ಸಂತ್ರಸ್ತರಾಗಿದ್ದಾರೆ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ.