‘ಮುಂದಿನ ಲೋಕಸಭೆ ಚುನಾವಣೆ ಮೋದಿ v/s ಶ್ರೀ ಸಾಮಾನ್ಯ’
ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬಂಡಾಯ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಜತೆ ವೇದಿಕೆ ಹಂಚಿಕೊಂಡ ಕೇಜ್ರಿವಾಲ್ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಮೋದಿಯವರ ಆರ್ಥಿಕ ಯೋಜನೆಗಳನ್ನು ಬಹಿರಂಗವಾಗಿ ಪ್ರಶ್ನಿಸಿದ್ದ ಯಶವಂತ್ ಸಿನ್ಹಾಗೆ ಮೆಚ್ಚುಗೆ ವ್ಯಕ್ತಪಡಿಸಿದರು.