ಮೊದಲಿಗೆ ಚಿಕನ್ ಅನ್ನು ಚೆನ್ನಾಗಿ ತೊಳೆದು ಅದಕ್ಕೆ ಕಾಳು ಮೆಣಸಿನ ಪುಡಿ, ಅರಿಶಿಣ ಪುಡಿ, ಕೊತ್ತಂಬರಿ ಪುಡಿ, ರುಚಿಗೆ ತಕ್ಕ ಉಪ್ಪು , ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ ಒಂದು ಗಂಟೆ ಇಡಿ.
ನಂತರ ಒಂದು ಬಾಣಲೆಯನ್ನು ಬಿಸಿ ಮಾಡಿ ಅದಕ್ಕೆ 2 ಚಮಚ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆ ಹಾಕಿ ಕರಿಬೇವಿನ ಎಲೆ ಹಾಕಿ, ಈರುಳ್ಳಿ, ಹಸಿ ಮೆಣಸಿನ ಕಾಯಿ ಹಾಕಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ.
ನಂತರ ಚಿಕನ್ ಹಾಕಿ, ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ 5 ನಿಮಿಷ ಫ್ರೈ ಮಾಡಿ, ನಂತರ ಕಡಿಮೆ ಉರಿಯಲ್ಲಿ ಅರ್ಧಗಂಟೆ ಬೇಯಿಸಿ.
ಚಿಕನ್ ಬೆಂದ ಮೇಲೆ ಸ್ವಲ್ಪ ನಿಂಬೆ ರಸ ಹಿಂಡಿ ಮಿಕ್ಸ್ ಮಾಡಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿದರೆ ಪೆಪ್ಪರ್ ಚಿಕ್ಕನ್ ರೆಡಿ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ