- ಒಂದು ಪಾತ್ರೆಯಲ್ಲಿ ಮೈದಾ, ಕಾರ್ನ್ ಹಿಟ್ಟು, ಅಕ್ಕಿ ಹಿಟ್ಟು, ಮೆಣಸಿನ ಪುಡಿ, ಧನಿಯಾ, ಮೆಣಸಿನ ಪುಡಿ, ಅರಿಶಿನ, ಮೊಟ್ಟೆ, ಕತ್ತರಿಸಿದ ಬೆಳ್ಳುಳ್ಳಿ, ಶುಂಠಿ, ಕರಿಬೇವಿನ ಎಲೆ, ಹಸಿ ಮೆಣಸಿನಕಾಯಿ, ಜೀರಿಗೆ ಪುಡಿ, ಚಿಕನ್ ಮಸಾಲ, ಗರಂ ಮಸಾಲ, ಇಂಗು, ಬೇಕಿಂಗ್ ಪೌಡರ್ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಸೇರಿಸಿ.
- ಎಲ್ಲಾ ಸಾಮಾಗ್ರಿಗಳಿಗೆ ಸ್ವಲ್ಪ ನೀರನ್ನು ಬೆರೆಸಿ, ಚೆನ್ನಾಗಿ ಮಿಶ್ರಗೊಳಿಸಿ.- ನಂತರ ಚಿಕನ್ ತುಂಡುಗಳನ್ನು ಹಾಕಿ ಚೆನ್ನಾಗಿ ಬೆರೆಸಿ.- ಎರಡು ಚಮಚ ವಿನೆಗರ್ ಸೇರಿಸಿ, ಮಿಶ್ರಗೊಳಿಸಿ. ಅದು ಪಕೋಡಕ್ಕೆ ಉತ್ತಮ ರುಚಿ ನೀಡುವುದು.
- ಪಕೋಡ ಬೇಯಿಸುವ ಮೊದಲು 30 ನಿಮಿಷಗಳ ಕಾಲ ಫ್ರಿಜ್ ನಲ್ಲಿ ಇಟ್ಟು ತಣ್ಣಗಾಗಿಸಿಕೊಳ್ಳಿ.
- ಒಂದು ಬಾಣಲೆಯಲ್ಲಿ ಕರಿಯಲು ಎಣ್ಣೆಯನ್ನು ಹಾಕಿ ಬಿಸಿ ಮಾಡಲು ಇಡಿ.- ಎಣ್ಣೆ ಬಿಸಿಯಾದ ಬಳಿಕ ಮಿಶ್ರಣವನ್ನು ಎಣ್ಣೆಯಲ್ಲಿ ಬಿಡಿ.- ಪಕೋಡವು ಎರಡು ಭಾಗದಲ್ಲೂ ಚೆನ್ನಾಗಿ ಬೆಂದು ಹೊಂಬಣ್ಣಕ್ಕೆ ಬರಬೇಕು.
- ಗರಿಗರಿಯಾದ ಪಕೋಡವನ್ನು ಸಾಸ್ ಜೊತೆಗೆ ಸೇವಿಸಿ.- ಇದನ್ನು ಸಂಜೆ ಸಮಯದ ಟೀ ಅಥವಾ ಊಟದ ಮೊದಲು ಸ್ಟಾರ್ಟರ್ ಆಗಿ ಸೇವಿಸಬಹುದು.