ಮಾಡುವ ವಿಧಾನ -
ಮೊದಲು ಒಂದು ಪಾತ್ರೆಯಲ್ಲಿ ತರಕಾರಿಗಳನ್ನು ಹಾಕಿ ಅದಕ್ಕೆ ನೀರು ಮತ್ತು ಸ್ವಲ್ಪ ಉಪ್ಪು ಹಾಕಿ ಬೇಯಿಸಬೇಕು. ನಂತರ ಒಂದು ಪಾತ್ರೆಯಲ್ಲಿ ಅಕ್ಕಿ ಮತ್ತು ಬೇಳೆಯನ್ನು ತೊಳೆದು ಕುಕ್ಕರಿನಲ್ಲಿ ಹಾಕಿ ಅದಕ್ಕೆ ಸ್ವಲ್ಪ ನೀರು ಜಾಸ್ತಿ ಹಾಕಿ ಬೇಯಿಸಬೇಕು. ಅನ್ನ ಚೆನ್ನಾಗಿ ಬೆಂದಿರಲಿ. ನಂತರ ಸ್ವಲ್ಪ ದೊಡ್ಡ ಬಾಣಲೆಯನ್ನು ತೆಗೆದುಕೊಂಡು ಅದನ್ನು ಸಣ್ಣ ಉರಿಯಲ್ಲಿಟ್ಟು ಎಣ್ಣೆಯನ್ನು ಬಿಸಿಮಾಡಿ. ಅದಕ್ಕೆ ಸಾಸಿವೆ, ಕರಿಬೇವಿನ ಎಲೆ, ಚಿಟಿಕೆಯಷ್ಟು ಇಂಗು, ಗೋಡಂಬಿ ಚೂರುಗಳನ್ನು ಹಾಕಿ 2 ರಿಂದ 3 ನಿಮಿಷ ಹುರಿಯಿರಿ. ನಂತರ ಅದಕ್ಕೆ ಕತ್ತರಿಸಿದ ಈರುಳ್ಳಿ ಹಾಕಿ ಅದು ಕಂದು ಬಣ್ಣ ಬರುವಾಗ ಅದಕ್ಕೆ ಟೊಮೆಟೋ ಹಾಕಿ ಚೆನ್ನಾಗಿ ಬೇಯಿಸಿ ತದನಂತರ ಮೊದಲೇ ಬೇಯಿಸಿದ ತರಕಾರಿಗಳನ್ನು ಅದಕ್ಕೆ ಸೇರಿಸಿ ತಿರುವಿದ ಮೇಲೆ ಅದಕ್ಕೆ 3 ಚಮಚ ಬಿಸಿ ಬೇಳೆ ಬಾತ್ ಪುಡಿ ಹುಣಸೆ ಹಣ್ಣಿನ ರಸ ಮತ್ತು ಉಪ್ಪು ಹಾಕಿ ಸ್ವಲ್ಪ ಹೊತ್ತು ಬೇಯಿಸಿ ಅದಕ್ಕೆ ಬೇಯಿಸಿದ ಅನ್ನ ಮತ್ತು ಹಿಸುಕಿದ ಬೇಳೆಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ಸ್ವಲ್ಪ ತುಪ್ಪ ಸೇರಿಸಿ 5 ನಿಮಿಷ ಬೇಯಿಸಿದರೆ ರುಚಿಕರವಾದ ಬಿಸಿಬೇಳೆ ಬಾತ್ ಸವಿಯಲು ಸಿದ್ಧ.