ಮಾಡುವ ವಿಧಾನ
* ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಕುರಿಮಾಂಸ, ಶುಂಠಿ ಮತ್ತು ಬೆಳ್ಳುಳ್ಳಿ ಪೇಸ್ಟ್, ಬಡೆಸೊಪ್ಪು, ಮೊಸರು, ಅರಿಶಿನ, ಕೆಂಪು ಮೆಣಸಿನ ಪುಡಿ ಮತ್ತು ಉಪ್ಪು ಸೇರಿಸಿ, 1/2 ಲೀಟರ್ ನೀರು ಸೇರಿಸಿ, ಮಿಶ್ರಣ ಮಾಡಿ ಮುಚ್ಚಿಟ್ಟು 1 ತಾಸು ಚೆನ್ನಾಗಿ ಬೇಯಿಸಿ.
* ಬೇರೆ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದರಲ್ಲಿ ಸಾಸಿವೆ ಹಾಕಿ ಹುರಿದು, ನಂತರ ಚಕ್ಕೆ, ವವಂಗ, ಏಲಕ್ಕಿಯನ್ನು ಹಾಕಿ ಹುರಿಯಿರಿ. ನಂತರ ಈರುಳ್ಳಿ, ಹಸಿಮೆಣಸು, ಕರಿಬೇವಿನ ಎಲೆಗಳನ್ನು ಹಾಕಿ ಹುರಿಯಿರಿ. ನಂತರ ಟೊಮೆಟೊ ರಸ ಕೆಂಪು ಮೆಣಸಿನ ಪುಡಿ, ಜೀರಿಗೆ ಪುಡಿ, ಧನಿಯಾ ಪುಡಿ ಹಾಕಿ ಮಿಶ್ರಣ ಮಾಡಿ, ನಂತರ ಇದಕ್ಕೆ ಬೆಂದ ಕುರಿಮಾಂಸ, ಕೊತ್ತಂಬರಿ ಸೊಪ್ಪನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಬಿಸಿ ಬಿಸಿ ಅನ್ನ ಅಥವಾ ಚಪಾತಿ ಜೊತೆ ಸೇವಿಸಿ.