ಮಾನಸ ಸರೋವರ ಯಾತ್ರೆ

ಭಾನುವಾರ, 30 ಡಿಸೆಂಬರ್ 2007 (16:06 IST)
WD
ಲಯಕರ್ತೃ ಶಿವನ ಸ್ಥಾನ ಎಂದು ಪುರಾಣಗಳಲ್ಲಿ ಹೇಳಿರುವ ಕೈಲಾಸ ಪರ್ವತ ಮತ್ತು ಮಾನಸ ಸರೋವರಗಳ ಕುರಿತು ಇರುವ ನಂಬಿಕೆ ಮತ್ತು ಐತಿಹ್ಯಗಳು ಈ ಬಾರಿಯ ನಮ್ಮ ಧಾರ್ಮಿಕ ಪಯಣದ ಕಥಾ ವಸ್ತು.

ಮಾನಸ ಸರೋವರ ಮತ್ತು ಕೈಲಾಸ ಪರ್ವತಗಳೆರಡು ಒಂದಕ್ಕೊಂದು ಹೊಂದಿಕೊಂಡೇ ಇವೆ. ಸ್ಪಟಿಕದಷ್ಟೆ ಶುಭ್ರವಾಗಿರುವ ಮಾನಸ ಸರೋವರ ಹಿಂದೂಗಳ ಪಾಲಿಗೆ ಜೀವನದಲ್ಲಿ ಒಮ್ಮೆಯಾದರೂ ಮಿಂದು ಪಾವನರಾಗಬೇಕೆಂದು ಬಯಸುವ ಸ್ಥಳ.

ಪುರಾಣ ಮತ್ತು ಪುರಾಣೋತ್ತರ ಕಾಲದಲ್ಲಿ ಕೈಲಾಸ ಪರ್ವತದ ಮಹಿಮೆಯನ್ನು ಬಣ್ಣಿಸಲಾಗಿದ್ದು. ಹಿಂದೂಗಳ ಪಾಲಿಗೆ ಕೈಲಾಸ ಪರ್ವತ ಲಯ ಕರ್ತೃ ಶಿವನ ವಾಸಸ್ಥಾನ. ಕೈಲಾಸ ಪರ್ವತದಲ್ಲಿ ಬೆಳಕು ಮತ್ತು ಶಬ್ಧಗಳ ಸಂಗಮದಿಂದ ಓಂಕಾರ ನಾದ ಹೊರ ಹೊಮ್ಮುತ್ತದೆ. ಶಿವನು ನಾದೋಪಾಸಕನಾದ ಕಾರಣ ಓಂಕಾರದ ವ್ಯುತ್ಪತ್ತಿ ಇಲ್ಲಿಯೆ ಆಗಿದೆ ಎಂದು ಧರ್ಮ ಗ್ರಂಥಗಳು ಪ್ರತಿಪಾದಿಸುತ್ತವೆ. ಹಿಂದೂಗಳ ಪಾಲಿಗೆ " ಓಂ" ಪವಿತ್ರ ಶಬ್ಧ. ಮಾನಸ ಸರೋವರ ಭಾರತೀಯರ ಆದ್ಯಾತ್ಮಿಕತೆಯನ್ನು ಪ್ರತಿನಿಧಿಸುತ್ತದೆ ಎಂಬ ನಂಬಿಕೆ ಹಲವರಲ್ಲಿ ಇದೆ.

ಕೈಲಾಸ ಪರ್ವತದಲ್ಲಿ ಕಲ್ಪವೃಕ್ಷ ಇದೆ ಎಂಬ ನಂಬಿಕೆ ಇದೆ. ಸ್ವರ್ಗಲೋಕದ ಶ್ರೀಮಂತ ದೇವತೆ ಕುಬೇರನ ನಗರ ಇದೆ ಎಂಬ ನಂಬಿಕೆ ಇದ್ದು, ಪರ್ವತದ ನಾಲ್ಕು ದಿಕ್ಕುಗಳು ಹವಳ ಮುತ್ತು ಚಿನ್ನಗಳನ್ನು ಪ್ರತಿನಿಧಿಸುತ್ತವೆ ಎಂಬ ಪ್ರತೀತಿ ಇದೆ.
WD


ಬೌದ್ಧ ಧರ್ಮಿಯರಿಗೂ ಕೈಲಾಸ ಪರ್ವತ ಪವಿತ್ರ ಯಾತ್ರಾಸ್ಥಳವಾಗಿದ್ದು, ಇಲ್ಲಿ ಉಗ್ರ ಸ್ವರೂಪಿ ಬುದ್ಧ ವಾಸವಾಗಿದ್ದಾನೆ ಎಂಬ ನಂಬಿಕೆ ಅವರಲ್ಲಿ ಇದೆ. ಜೈನ ಧರ್ಮದ ಮೊದಲ ತಿರ್ಥಂಕರ ಕೈಲಾಸ ಪರ್ವತದಲ್ಲಿ ನಿರ್ವಾಣ ಹೊಂದಿದನು ಎಂಬುದು ಅವರ ವಾದ. ಒಟ್ಟಿನಲ್ಲಿ ಏನೆ ಇರಲಿ ಇದು ಮೂವರು ಧರ್ಮಿಯರಿಗೂ ಪವಿತ್ರ ಸ್ಥಳ.

ಮಾನಸ ಸರೋವರ
ಮಹಾರಾಜ ಮಂದಾತನು ಇಲ್ಲಿ ತಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತ ಮಾಡಿಕೊಂಡ ಕಾರಣ ಈ ಸರೋವರಕ್ಕೆ ಮಾನಸ ಸರೋವರ ಎಂಬ ಹೆಸರು ಬಂದಿರುವ ಹೇಳಿಕೆಗಳು ಧರ್ಮಗ್ರಂಥಗಳಲ್ಲಿ ಉಲ್ಲೇಖವಾಗಿವೆ.
WD

ಬೌದ್ಧ ಧರ್ಮದ ಪ್ರಕಾರ ಸರೋವರದ ಮಧ್ಯದಲ್ಲಿ ಒಂದು ದಿವ್ಯ ಔಷಧಿಯ ಮರವಿದೆ ಎಂದೂ, ಆ ಮರದ ಹಣ್ಣುಗಳನ್ನು ದೈಹಿಕ ಮತ್ತು ಮಾನಸಿಕ ಆರೋಗ್ಯ ಚಿಕಿತ್ಸೆಗೆ ಬಳಸಿದರೆ ಗುಣವಾಗುತ್ತಾರೆ ಎಂಬ ನಂಬಿಕೆ ಇದೆ.
ಮಾನಸ ಸರೋವರ ಮತ್ತು ಕೈಲಾಸ ಪರ್ವತದ ಯಾತ್ರೆ ಸುಲಭದ್ದಲ್ಲ. ಸಮುದ್ರ ಮಟ್ಟದಿಂದ ಸುಮಾರು 22,028 ಅಡಿ ಎತ್ತರದಲ್ಲಿ ಇರುವುದರಿಂದ ಆಮ್ಲಜನಕದ ಕೊರತೆಯ ಕಾರಣ ಉಸಿರಾಟ, ತಲೆ ಸುತ್ತುವುದು, ನಿಶ್ಯಕ್ತಿ ಕಾಡುವ ಸಾಧ್ಯತೆ ಇದೆ. ಅಲ್ಲದೆ ಸಮುದ್ರದಿಂದ ಎತ್ತರ ಪ್ರದೇಶಕ್ಕೆ ತೆರಳಿದ ಸಮಯದಲ್ಲಿ ವಾತಾವರಣಕ್ಕೆ ದೇಹ ಹೊಂದಿಕೊಳ್ಳುವುದು ಕಷ್ಟವಾಗಬಹುದು.

ಮಾನಸ ಸರೋವರ ಮತ್ತು ಕೈಲಾಸ ಪರ್ವತಗಳು ಚೀನಾದ ವ್ಯಾಪ್ತಿಯಲ್ಲಿ ಇರುವುದರಿಂದ ಕೈಲಾಸ ಪರ್ವತ ದರ್ಶನಕ್ಕೆ ಭಾರತೀಯ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವಾಲಯವು ಪ್ರತಿ ವರ್ಷ ಪ್ರವಾಸವನ್ನು ಆಯೋಜಿಸುತ್ತದೆ. ಸುಮಾರು 28 ದಿನಗಳ ಚಾರಣವಾಗಿರುವುದರಿಂದ ದೈಹಿಕವಾಗಿ ಸಮರ್ಥರಾಗಿರುವವರು ಮಾತ್ರ ಕೈಲಾಸ ದರ್ಶನ ಮಾಡಬಹುದು.
WD

ವಿಮಾನ ಮೂಲಕ ಪ್ರಯಾಣ ಮಾಡುವುದಾದರೆ ಕಠ್ಮಂಡುವರೆಗೆ ಮಾತ್ರ ಸಾಧ್ಯ, ಅಲ್ಲಿಂದ ಸರೋವರದ ವರೆಗೆ ರಸ್ತೆ ಮೂಲಕ ಪಯಣಿಸಬೇಕು.