ಪ್ರಮುಖ ವ್ಯಕ್ತಿಗಳಿಂದ ದೇಶದ ಜನರಿಗೆ ಶುಭಾಶಯ

ಬುಧವಾರ, 26 ಜನವರಿ 2022 (08:22 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ದೇಶದ ಜನತೆಗೆ ಗಣರಾಜ್ಯೋತ್ಸವ ಶುಭಾಶಯ ಕೋರಿದ್ದಾರೆ.
 
ಎಲ್ಲರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.  ಅದಕ್ಕೂ ಮೊದಲು ಪದ್ಮ ಪ್ರಶಸ್ತಿ ಭಾಜನರಾದವರಿಗೆ ಶುಭ ಹಾರೈಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು.

ಇಡೀ ರಾಷ್ಟ್ರವೇ ಗೌರವ ಪಡುತ್ತಿದೆ. ಸಮಾಜಕ್ಕೆ ನೀವು ನೀಡಿದ ಕೊಡುಗೆಗಳ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಹಾಗೇ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿ, ಭಾರತದ ಎಲ್ಲ ಜನರಿಗೂ ಕೂಡ ಗಣರಾಜ್ಯೋತ್ಸವದ ಶುಭಾಶಯಗಳು. ಪ್ರಜಾಪ್ರಭುತ್ವವನ್ನು ಆಚರಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ವಿಚಾರಗಳು, ಮೌಲ್ಯಗಳನ್ನು ಗೌರವಿಸಲು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮ ದೇಶದ ಎಲ್ಲ ನಾಗರಿಕರಿಗೂ ಹೃತ್ಪೂರ್ವಕ ಶುಭಾಶಯಗಳು. ನಮ್ಮ ದೇಶದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ನ್ಯಾಯದಲ್ಲಿ ನಂಬಿಕೆಯಿಡಬೇಕು ಎಂದು ಹೇಳಿದರು. ಈಗಾಗಲೇ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ