ಭಾರತ ಈ ಬಾರಿ 73ನೇ ಗಣರಾಜ್ಯೋತ್ಸವ ಆಚರಿಸಿಕೊಳ್ಳುತ್ತಿದೆ.
ಭಾರತಕ್ಕೆ ಸ್ವಾತಂತ್ರ್ಯ ಬಂದಿದ್ದು 1947ರ ಆಗಸ್ಟ್ 15ರಂದು. ಹೀಗಾಗಿ ಪ್ರತಿವರ್ಷ ಆಗಸ್ಟ್ 15ನ್ನು ಸ್ವಾತಂತ್ರ್ಯೋತ್ಸವ ಎಂದು ಆಚರಣೆ ಮಾಡುತ್ತೇವೆ. ಅದೇ, ದೇಶದಲ್ಲಿ ಅಧಿಕೃತವಾಗಿ ಸಂವಿಧಾನ ಜಾರಿಗೆ ಬಂದಿದ್ದು 1950ರ ಜನವರಿ 26ರಂದು.
ಅಂದಿನಿಂದಲೂ ಪ್ರತಿವರ್ಷ ಜನವರಿ 26ರನ್ನು ಗಣರಾಜ್ಯೋತ್ಸವ ಅಥವಾ ಗಣತಂತ್ರ ದಿನ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ಕರಡು ಸಮಿತಿಯ ನೇತೃತ್ವ ವಹಿಸಿದ್ದರು. ಸಂವಿಧಾನ ರಚನೆಯಾಗಿ ಜಾರಿಗೆ ಬಂದ ಬಳಿಕ ಭಾರತವೊಂದು ಸಾರ್ವಭೌಮ ರಾಷ್ಟ್ರವಾಯಿತು.
ಹಾಗೇ, ಭಾರತದಲ್ಲಿ 1949ರ ನವೆಂಬರ್ 26ರಂದು ಸಂವಿಧಾನ ಸಭೆಯಲ್ಲಿ, ಸಂವಿಧಾನವನ್ನು ಅಂಗೀಕರಿಸಿದ ನೆನಪಿಗೆ, ದೇಶದಲ್ಲಿ ಪ್ರತಿವರ್ಷ ನವೆಂಬರ್ 26ರನ್ನು ಸಂವಿಧಾನ ದಿನ ಎಂದೂ ಆಚರಣೆ ಮಾಡಲಾಗುತ್ತದೆ.