ಆಯ್ದ ಶೇರುಗಳ ಖರೀದಿ: ಅಲ್ಪ ಚೇತರಿಕೆ ಕಂಡ ಸೂಚ್ಯಂಕ

ಬುಧವಾರ, 21 ಮಾರ್ಚ್ 2012 (10:41 IST)
PTI
ಶೇರುಪೇಟೆಯ ಹೂಡಿಕೆದಾರರು ಕೆಲ ಆಯ್ದ ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ, ಶೇರುಪೇಟೆಯ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 46 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 42.81 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 9.20 ಪಾಯಿಂಟ್‌ಗಳ ಏರಿಕೆ ಕಂಡು 5,284.05 ಅಂಕಗಳಿಗೆ ತಲುಪಿದೆ.

ಶೇರುಪೇಟೆಯ ಹೂಡಿಕೆದಾರರು ಕೆಲ ಆಯ್ದ ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ, ಶೇರುಪೇಟೆಯ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ, ಬಂಡವಾಳ ಯಂತ್ರಗಳು, ತೈಲ ಮತ್ತು ಅನಿಲ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಹಾಂಗ್‌ಕಾಂಗ್‌‌ನ ಹಾಂಗ್‌ಸೆಂಗ್ ಸೂಚ್ಯಂಕ ಕೂಡಾ ಶೇ.0.33ರಷ್ಟು ಇಳಿಕೆ ಕಂಡಿದೆ. ಜಪಾನ್‌ನ ನಿಕೈಸೂಚ್ಯಂಕ ಸೇ.0.42 ರಷ್ಟು ಕುಸಿತ ಕಂಡಿದೆ.

ವೆಬ್ದುನಿಯಾವನ್ನು ಓದಿ