ರೆಪೋ ದರ ಏರಿಕೆ ಪ್ರಭಾವ: ಸಂವೇದಿ ಸೂಚ್ಯಂಕ ಪಾತಾಳಕ್ಕೆ

ಸೋಮವಾರ, 23 ಸೆಪ್ಟಂಬರ್ 2013 (11:53 IST)
PTI
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 206 ಪಾಯಿಂಟ್‌ಗಳ ಕುಸಿತ ಕಂಡಿದೆ

ಕಳೆದ ವಾರ ರಿಸರ್ವ್ ಬ್ಯಾಂಕ್ ರೆಪೋ ದರದಲ್ಲಿ ಅನಿರೀಕ್ಷಿತ ಏರಿಕೆ ಘೋಷಿದ್ದರಿಂದ ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬ್ಯಾಂಕಿಂಗ್, ರಿಯಲ್ಟಿ, ತೈಲ ಮತ್ತು ಅನಿಲ ಹಾಗೂ ವಾಹನೋದ್ಯಮ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿದ್ದರಿಂದ ಶೇರುಪೇಟೆಯ ಸೂಚ್ಯಂಕ 206.61 ಪಾಯಿಂಟ್‌ಗಳ ಕುಸಿತ ಕಂಡು 20,057.10 ಅಂಕಗಳಿಗೆ ತಲುಪಿದೆ.

ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 55.25 ಪಾಯಿಂಟ್‌ಗಳ ಕುಸಿತ ಕಂಡು 5956.85 ಅಂಕಗಳಿಗೆ ತಲುಪಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ರೆಪೋ ದರಗಳಲ್ಲಿ ಅನಿರೀಕ್ಷಿತವಾಗಿ ಏರಿಕೆ ಕಂಡಿದ್ದರಿಂದ, ಶೇರುಪೇಟೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ