ಸೆನ್ಸೆಕ್ಸ್: ಅಲ್ಪ ಕುಸಿತ ಕಂಡ ಸಂವೇದಿ ಸೂಚ್ಯಂಕ

ಸೋಮವಾರ, 10 ಫೆಬ್ರವರಿ 2014 (12:35 IST)
PTI
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ದುರ್ಬಲ ವಹಿವಾಟಿನಲ್ಲಿ 11 ಪಾಯಿಂಟ್‌ಗಳ ಅಲ್ಪ ಕುಸಿತ ಕಂಡಿದೆ.

ಎಫ್‌ಎಂಸಿಜಿ, ಬ್ಯಾಂಕಿಂಗ್ ಮತ್ತು ವಿದ್ಯುತ್ ಕ್ಷೇತ್ರದ ಶೇರುಗಳ ಮಾರಾಟಕ್ಕೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 11.24 ಪಾಯಿಂಟ್‌ಗಳ ಕುಸಿತ ಕಂಡು 20,336.15 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 1.75 ಪಾಯಿಂಟ್‌ಗಳ ಇಳಿಕೆ ಕಂಡು 6061.45 ಅಂಕಗಳಿಗೆ ತಲುಪಿದೆ.

ಭಾರ್ತಿ ಏರ್‌ಟೆಲ್, ಎನ್‌ಟಿಪಿಸಿ, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಗೇಲ್ ಇಂಡಿಯಾ ಸೇರುಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ.

ಬಿಎಚ್‌ಇಎಲ್, ಡಾ.ರೆಡ್ಡಿ ಲ್ಯಾಬ್, ಟಾಟಾ ಸ್ಟೀಲ್, ಸನ್‌ಫಾರ್ಮಾ, ರಿಲಯನ್ಸ್ ಇಂಡಸ್ಟ್ರೀ ಶೇರುಗಳು ವಹಿವಾಟಿನಲ್ಲಿ ಅಲ್ಪ ಚೇತರಿಕೆ ಕಂಡಿವೆ.

ವೆಬ್ದುನಿಯಾವನ್ನು ಓದಿ