ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಸಂವೇದಿ ಸೂಚ್ಯಂಕ

ಮಂಗಳವಾರ, 27 ಆಗಸ್ಟ್ 2013 (12:20 IST)
PTI
ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 450 ಪಾಯಿಂಟ್‌ಗಳ ಕುಸಿತ ಕಂಡಿದೆ.

ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳದೊಂದಿಗೆ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಕುಸಿತದಿಂದಾಗಿ, ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ತೊಡಗಿದ್ದರಿಂದ ಸೂಚ್ಯಂಕ 450 ಪಾಯಿಂಟ್‌ಗಳ ಕುಸಿತ ಕಂಡಿದೆ.

ಪಿಎಸ್‌ಯು, ಉಕ್ಕು, ವಾಹನೋದ್ಯಮ, ತೈಲ ಮತ್ತು ಬಂಡವಾಳ ವಸ್ತುಗಳ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 81.75 ಪಾಯಿಂಟ್‌ಗಳ ಕುಸಿತ ಕಂಡು 5394.75 ಅಂಕಗಳಿಗೆ ತಲುಪಿದೆ.

ಎಚ್‌ಡಿಎಫ್‌ಸಿ ಬ್ಯಾಂಕ್,ಒಎನ್‌ಜಿಸಿ, ಕೋಲ್ ಇಂಡಿಯಾ, ಸನ್‌ಫಾರ್ಮಾ, ಮಾರುತಿ ಸುಜುಕಿ, ಹಿಂಡಾಲ್ಕೋ, ಬಿಎಚ್‌ಇಎಲ್ ಮತ್ತು ಎಸ್‌ಬಿಐ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

ವೆಬ್ದುನಿಯಾವನ್ನು ಓದಿ