ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಶುಕ್ರವಾರ, 30 ಆಗಸ್ಟ್ 2013 (12:40 IST)
PTI
ಜಾಗತಿಕ ಮಾರುಕಟ್ಟೆಗಳ ಭರ್ಜರಿ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 196 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಐಟಿ, ತಂತ್ರಜ್ಞಾನ, ಹೆಲ್ತ್‌‍ಕೇರ್ ಮತ್ತು ಗೃಹೋಪಕರಣ ವಸ್ತುಗಳು ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ಬಿಎಸ್‌ಇ ಶೇರುಪೇಟೆ ಸಂವೇದಿ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 196 ಪಾಯಿಂಟ್‌ಗಳ ಇಳಿಕೆ ಕಂಡು 18,283.74 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 46.50 ಪಾಯಿಂಟ್‌ಗಳ ಏರಿಕೆ ಕಂಡು 5455.55 ಅಂಕಗಳಿಗೆ ತಲುಪಿದೆ.

ಟಾಟಾ ಸ್ಟೀಲ್, ಸನ್‌ಫಾರ್ಮಾ, ಟಿಸಿಎಸ್, ಎಚ್‌ಡಿಎಫ್‌ಸಿ ಬ್ಯಾಂಕ್, ವಿಪ್ರೋ, ಒಎನ್‌ಜಿಸಿ ಮತ್ತು ಎಚ್‌ಡಿಎಫ್‌ಸಿ ಶೇರುಗಳು ವಹಿವಾಟಿನಲ್ಲಿ ಚೇತರಿಕೆಯಾಗಿವೆ.

ಟಾಟಾ ಪವರ್, ಸೆಸಾ ಗೋವಾ, ಎನ್‌ಟಿಪಿಸಿ, ಕೋಲ್ ಇಂಡಿಯಾ ಮತ್ತು ಮಾರುತಿ ಸುಜುಕಿ ಕಂಪೆನಿಯ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

ವೆಬ್ದುನಿಯಾವನ್ನು ಓದಿ