ಸೆನ್ಸೆಕ್ಸ್: ಪಾತಾಳಕ್ಕೆ ಕುಸಿದ ಶೇರುಪೇಟೆ ಸೂಚ್ಯಂಕ

ಶುಕ್ರವಾರ, 24 ಜೂನ್ 2016 (13:47 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 950 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಫಾರೆಕ್ಸ್ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಕುಸಿತವಾಗಿರುವುದು ಕೂಡಾ ಶೇರುಪೇಟೆ ಕುಸಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಅಮದು ವಹಿವಾಟುದಾರರು ಮತ್ತು ಬ್ಯಾಂಕ್‌ಗಳಿಂದ ಡಾಲರ್ ಬೇಡಿಕೆಯಲ್ಲಿ ಹಚ್ಚಳವಾಗಿದ್ದರಿಂದ ದೇಶಿಯ ಕರೆನ್ಸಿ ರೂಪಾಯಿ ಕುಸಿತಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 948.54 ಪಾಯಿಂಟ್‌ಗಳ ಕುಸಿತ ಕಂಡು 26,053.68 ಅಂಕಗಳಿಗೆ ತಲುಪಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ