ಸೆನ್ಸೆಕ್ಸ್: 75 ಪಾಯಿಂಟ್‌ಗಳ ಕುಸಿತ ಕಂಡ ಶೇರುಸೂಚ್ಯಂಕ

ಶುಕ್ರವಾರ, 8 ಜುಲೈ 2016 (19:50 IST)
ಸಾಗರೋತ್ತರ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 75 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 34.62 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 74.59 ಪಾಯಿಂಟ್‌ಗಳ ಏರಿಕೆ ಕಂಡು 27,126.90 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 14.70 ಪಾಯಿಂಟ್‌ಗಳ ಕುಸಿತ ಕಂಡು 8,323.20 ಅಂಕಗಳಿಗೆ ತಲುಪಿದೆ.
 
ಮುಂದಿನ ವಾರದ ಆರಂಭದಲ್ಲಿ ಶೇರುಪೇಟೆಯಲ್ಲಿ ಯಾವ ಬದಲಾವಣೆಗಳಾಗುತ್ತವೆ ಎನ್ನುವುದನ್ನು ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನಲ್ಲಿ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ