ಜಿಎಸ್‌ಟಿ ನಿರೀಕ್ಷೆ: 120 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಸೂಚ್ಯಂಕ

ಗುರುವಾರ, 28 ಜುಲೈ 2016 (12:27 IST)
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 120 ಪಾಯಿಂಟ್‌ಗಳ ಚೇತರಿಕೆ ಕಂಡು 28,144.32 ಅಂಕಗಳಿಗೆ ತಲುಪಿದೆ.
 
ಮುಂಗಾರು ಅಧಿವೇಶನದಲ್ಲಿ ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನಲ್ಲಿ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 47.81 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 119.99 ಪಾಯಿಂಟ್‌ಗಳ ಕುಸಿತ ಕಂಡು 28,144.32 ಅಂಕಗಳಿಗೆ ತಲುಪಿದೆ.
 
ರಿಯಲ್ಟಿ, ಗೃಹೋಪಕರಣ ವಸ್ತುಗಳು, ವಾಹನೋದ್ಯಮ ಮತ್ತು ಎಫ್‌ಎಂಸಿಜಿ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಶೇ.1.13 ರಷ್ಟು ಚೇತರಿಕೆ ಕಂಡಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 32.85 ಪಾಯಿಂಟ್‌ಗಳ ಏರಿಕೆ ಕಂಡು 8,648.65 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.0.69 ಪಾಯಿಂಟ್‌ಗಳ ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.37 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.01 ರಷ್ಟು ಕುಸಿತ ಕಂಡಿದೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ