ಜಾಗತಿಕ ಮಾರುಕಟ್ಟೆಗಳ ಭರ್ಜರಿ ವಹಿವಾಟಿನಿಂದ ಸೂಚ್ಯಂಕ ಚೇತರಿಕೆ

ಬುಧವಾರ, 29 ಜೂನ್ 2016 (13:13 IST)
ಜಾಗತಿಕ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 149 ಪಾಯಿಂಟ್‌ಗಳ ಏರಿಕೆ ಕಂಡಿದೆ
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 126.84 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 149.33 ಪಾಯಿಂಟ್‌ಗಳ ಏರಿಕೆ ಕಂಡು 26,673.88.ಅಂಕಗಳಿಗೆ ತಲುಪಿದೆ. 
 
ರಿಯಲ್ಟಿ, ವಾಹನೋದ್ಯಮ ಬಂಡವಾಳ ವಸ್ತುಗಳು ಮತ್ತು ಗೃಹೋಪಕರಣ ವಸ್ತುಗಳ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 48.70 ಪಾಯಿಂಟ್‌ಗಳ ಚೇತರಿಕೆ ಕಂಡು 8,176.55 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.1.75 ರಷ್ಟು ಚೇತರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.68 ರಷ್ಟು ಏರಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.52 ರಷ್ಟು ಏರಿಕೆ ಕಂಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ