ಜಿಡಿಪಿ ಪ್ರಭಾವ: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ

ಬುಧವಾರ, 1 ಜೂನ್ 2016 (19:32 IST)
ಜಿಡಿಪಿ ದರ ಚೇತರಿಕೆ ಕಂಡಿದ್ದರಿಂದ ಹೂಡಿಕೆದಾರರ ಶೇರುಗಳ ಖರೀದಿಯಿಂದಾಗಿ ಶೇರುಪೇಟೆಯ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 46 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಎಫ್‌ಎಂಸಿಜಿ,ತಂತ್ರಜ್ಞಾನ ಮತ್ತು ತೈಲ ಮತ್ತು ಅನಿಲ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 45.97 ಪಾಯಿಂಟ್‌ಗಳ ಏರಿಕೆಯಾಗಿ 26,713.93 ಅಂಕಗಳಿಗೆ ತಲುಪಿದೆ
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 57.64 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 47 ಪಾಯಿಂಟ್‌ಗಳ ಏರಿಕೆ ಕಂಡಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ವೆಬ್ದುನಿಯಾವನ್ನು ಓದಿ