ಸೆನ್ಸೆಕ್ಸ್: 563 ಪಾಯಿಂಟ್‌ಗಳ ಕುಸಿತ ಕಂಡ ಶೇರುಸೂಚ್ಯಂಕ

ಶುಕ್ರವಾರ, 4 ಸೆಪ್ಟಂಬರ್ 2015 (18:39 IST)
ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 562.88 ಪಾಯಿಂಟ್‌ಗಳ ಕುಸಿತ ಕಂಡು 14 ತಿಂಗಳ ಕನಿಷ್ಠ ಕುಸಿತವಾಗಿದೆ.
 
ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.   
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಅಂತ್ಯಕ್ಕೆ 562.88 ಪಾಯಿಂಟ್‌ಗಳ ಇಳಿಕೆ ಕಂಡು 25,201.90 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 167.95 ಪಾಯಿಂಟ್‌ಗಳ ಕುಸಿತ ಕಂಡು 7655.05 ಅಂಕಗಳಿಗೆ ತಲುಪಿದೆ.  
 

ವೆಬ್ದುನಿಯಾವನ್ನು ಓದಿ