ಜಿಎಸ್‌ಟಿ ನಿರೀಕ್ಷೆ: ಭರ್ಜರಿ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ

ಗುರುವಾರ, 26 ನವೆಂಬರ್ 2015 (19:00 IST)
ಜಾಗತಿಕ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆಯೂ ಶೇರುಪೇಟೆಯ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 183 ಪಾಯಿಂಟ್‌ಗಳ ಚೇತರಿಕೆ ಕಂಡಿದೆ.
 
ರಿಯಲ್ಟಿ, ವಾಹನೋದ್ಯಮ ಮತ್ತು ಉಕ್ಕು ಕ್ಷೇತ್ರದ ಶೇರುಗಳ ವಹಿವಾಟಿನಲ್ಲಿ ಚೇತರಿಕೆ ಹಾಗೂ ಸಂಸತ್ತಿನಲ್ಲಿ ಜಿಎಸ್‌ಟಿ ಮಸೂದೆಗೆ ಅಂಗೀಕಾರ ದೊರೆಯುವ ನಿರೀಕ್ಷೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಮುಂದಾಗಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 182.89 ಪಾಯಿಂಟ್‌ಗಳ ಏರಿಕೆ ಕಂಡು 25,958.63 ಅಂಕಗಳಿಗೆ ತಲುಪಿದೆ. ಶೇರುಪೇಟೆಯ 30 ಕ್ಷೇತ್ರಗಳಲ್ಲಿ 22 ಕ್ಷೇತ್ರಗಳು ವಹಿವಾಟಿನಲ್ಲಿ ಲಾಭದತ್ತ ಸಾಗಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ, ಇಂದಿನ ವಹಿವಾಟಿನ ಮುಕ್ತಾಯಕ್ಕೆ52.20 ಪಾಯಿಂಟ್‌ಗಳ ಏರಿಕೆ ಕಂಡು 7,883.80 ಅಂಕಗಳಿಗೆ ತಲುಪಿದೆ.
 
ಗೇಲ್, ಐಟಿಸಿ, ಎಂಆಂಡ್ಎಂ, ಆರ್‌ಐಎಲ್,ಹಿಂಡಾಲ್ಕೋ, ಟಾಟಾ ಸ್ಚೀಲ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ವಾಹನೋದ್ಯಮ, ಉಕ್ಕು , ಗೃಹೋಪಕರಣ ವಸ್ತುಗಳು ಮತ್ತು ವಿದ್ಯುತ್ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.  
 
ನಿನ್ನೆ ಗುರುನಾನಕ ಜಯಂತಿ ಹಿನ್ನೆಲೆಯಲ್ಲಿ ಶೇರುಪೇಟೆಗೆ ಸಾರ್ವಜನಿಕ ರಜೆ ಘೋಷಿಸಲಾಗಿತ್ತು.

ವೆಬ್ದುನಿಯಾವನ್ನು ಓದಿ