ಆರ್‌ಬಿಐ ಪರಿಷ್ಕರಣ ಸಭೆ ಮುಂದಿರುವಂತೆ ಚೇತರಿಕೆ ಕಂಡ ಶೇರುಸೂಚ್ಯಂಕ

ಸೋಮವಾರ, 8 ಆಗಸ್ಟ್ 2016 (14:47 IST)
ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳದಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 137 ಪಾಯಿಂಟ್‌ಗಳ ಏರಿಕೆ ಕಂಡಿದೆ. 
 
ಏಷ್ಯಾ ಶೇರುಪೇಟೆಗಳ ಚೇತರಿಕೆಯ ವಹಿವಾಟಿನ ಪ್ರಭಾವ ದೇಶಿಯ ಶೇರುಪೇಟೆ ಮೇಲೆ ಬೀರದ್ದರಿಂದ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 380.84 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 136.83 ಪಾಯಿಂಟ್‌ಗಳ ಏರಿಕೆ ಕಂಡು 28,215.18 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 38.05 ಪಾಯಿಂಟ್‌ಗಳ ಏರಿಕೆ ಕಂಡು 8,721.20 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.21 ರಷ್ಟು ಚೇತರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ.1.99 ರಷ್ಟು ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.1.04 ರಷ್ಟು ಏರಿಕೆಯಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ